Connect with us

KARNATAKA

ನಟ ದರ್ಶನ್ ಒಡೆತನದ ಫಾರ್ಮ್ ಹೌಸ್ ನಲ್ಲಿ ಬಿಹಾರ್ ಮೂಲದ ವ್ಯಕ್ತಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ಮೈಸೂರು: ಕನ್ನಡದ ಖಾತ ನಟ ದರ್ಶನ್‌ ಒಡೆತನದ ವಿನೇಶ್ ಫಾರಂ ಹೌಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.


ಟಿ. ನರಸೀಪುರ ರಸ್ತೆಯಲ್ಲಿರುವ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್‌ನಲ್ಲಿ ಶಿವಮೊಗ್ಗ ಮೂಲದ ಕುಟುಂಬವೊಂದು ಕೂಲಿ ಕೆಲಸ‌ ಮಾಡಿಕೊಂಡಿದ್ದು, ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು. ಅದೇ ಫಾರಂ ಹೌಸ್‌ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರಕದ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.