LATEST NEWS
ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರಗೈದ ಅಪ್ಪ

ಮಂಗಳೂರು: ಅಪ್ಪನೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗದಿ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ರಾಮಚಂದ್ರಪ್ಪ ಎಂದು ಗುರುತಿಸಲಾಗಿದ್ದು, ಈತ ತನ್ನ ಮಗಳು 5ನೇ ತರಗತಿಯಲ್ಲಿದ್ದಾಗ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದ. ಪ್ರಸ್ತುತ ಆಕೆ 10ನೇ ತರಗತಿ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದಾಗ ಪುತ್ರಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ.

ಇದರಿಂದಾಗಿ ಆಕೆ ದೈಹಿಕ ಮತ್ತು ಮಾನಸಿಕ ತೊಂದರೆಯಿಂದ ಬಳಲುತ್ತಿದ್ದಾಳೆ. ಅತ್ಯಾಚಾರ ಸಮಯದಲ್ಲಿ ಆಕೆಗೆ ತಿಳಿವಳಿಕೆ ಇಲ್ಲದ ಕಾರಣ ವಿಳಂಬವಾಗಿ ದೂರು ನೀಡಲಾಗಿದೆ. ಆ ಬಳಿಕವೂ ಆಗಾಗ ಅತ್ಯಾಚಾರ ಮಾಡುತ್ತಿದ್ದು, ಅದನ್ನು ಹೇಳಿಕೊಳ್ಳಲಾಗದೆ ಮಾನಸಿಕವಾಗಿ ನೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.