Connect with us

    LATEST NEWS

    ಔಷಧ ಪಡೆದು ಮಲಗಿದ್ದ ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ – ಐಎಎಫ್ ಲೆಫ್ಟಿನೆಂಟ್ ಬಂಧನ

    ಚೆನ್ನೈ: ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.


    ಕೊಯಮತ್ತೂರ್ ಏರ್ ಪೋರ್ಸ್ ಆಡಳಿತಾತ್ಮಕ ಕಾಲೇಜಿನಲ್ಲಿ ಎರಡು ವಾರಗಳ ಹಿಂದೆ ಪ್ರಕರಣ ನಡೆದಿತ್ತು. ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರೂ ಯಾವುದೇ ಕ್ರಮಕೈಗೊಳ್ಳದ ಹಿನ್ನಲೆಯಲ್ಲಿ ಸಂತ್ರಸ್ತೆ ಕೊಯಮತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ ಎಂದು ಕೊಯಮತ್ತೂರ್ ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆ ದೂರಿನಲ್ಲಿ ಸೆಪ್ಟೆಂಬರ್ 10ರಂದು ಕ್ರೀಡೆಯೊಂದರಲ್ಲಿ ಭಾಗವಹಿಸಿದ್ದಾಗ ಬಿದ್ದು ಗಾಯವಾಗಿತ್ತು. ಔಷದ ತೆಗೆದುಕೊಂಡು ಮಲಗಿದ್ದೆ. ಆದರೆ ಮಧ್ಯರಾತ್ರಿ ನನಗೆ ಎಚ್ಚರವಾದಾಗ ನನ್ನ ಮೇಲೆ ಅತ್ಯಾಚಾರ ಆಗಿದ್ದು ಗೊತ್ತಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ಸದ್ಯ ಪ್ರಕರಣದ ಆರೋಪಿಯಾಗಿರುವ ಅಮರಿಂದರ್ ಅವರನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply