FILM
ಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆ – ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ವರ್ಶ

ಮುಂಬೈ ಫೆಬ್ರವರಿ 18: ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆ ಎಂದು ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಶನಿವಾರ ರಶ್ಮಿಕಾ ಸಂಚರಿಸುತ್ತಿದ್ದ ಏರ್ ವಿಸ್ತಾರ ವಿಮಾನವು ಮುಂಬೈಯಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿತ್ತು. ಮುಂಬೈ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ 30 ನಿಮಿಷಗಳ ನಂತರ ವಿಮಾನ ಮತ್ತೆ ಮುಂಬೈಗೆ ಮರಳಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ವಿಮಾನ ತುರ್ತು ಭೂಸ್ಪರ್ಶ ಮಾಡಿದ ವೇಳೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆ ನಟಿ ಮತ್ತು ಸಹ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ರಶ್ಮಿಕಾ ಸುರಕ್ಷಿತರಾಗಿದ್ದಾರೆ. ಅವರು ವಿಮಾನದಲ್ಲಿ ಕುಳಿತಿರುವ ಫೋಟೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಆತಂಕದ ಕ್ಷಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಅನುಭವವನ್ನು ಹಂಚಿಕೊಂಡಿರು ಅವರು, ʼʼಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆʼʼ ಎಂದು ಬರೆದುಕೊಂಡಿದ್ದಾರೆ.