FILM
ರಶ್ಮಿಕಾ ಮಂದಣ್ಣಗೆ ಸಣ್ಣ ಆಕ್ಸಿಡೆಂಟ್ – ಒಂದು ತಿಂಗಳಿನಿಂದ ಮನೆಯಲ್ಲೇ ವಿಶ್ರಾಂತಿ
ಬೆಂಗಳೂರು ಸೆಪ್ಟೆಂಬರ್ 10: ಕಳೆದ ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರು ಸಾಮಾಜಿಕ ಜಾಲತಾಣ ಹಾಗೂ ಪಬ್ಲಿಕ್ ಆಗಿ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ಇದೀಗ ಅದಕ್ಕೆ ಕಾರಣ ಏನು ಎನ್ನುವುದನ್ನು ಸ್ವತಃ ರಶ್ಮಿಕಾ ಮಂದಣ್ಣ ತಿಳಿಸಿದ್ದಾರೆ. ಅಲ್ಲದೆ ಬದುಕು ಬಹಳ ಅಮೂಲ್ಯವಾಗಿದ್ದು, ತುಂಬಾ ಹುಷಾರಾಗಿರಿ ಎಂದು ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.
ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿರುವ ಅವರು ಕಳೆದ ತಿಂಗಳು ನನಗೆ ಚಿಕ್ಕ ಅಪಘಾತ ಆಯಿತು. ವೈದ್ಯರ ಸಲಹೆಯಂತೆ ನಾನು ಮನೆಯಲ್ಲೇ ಇದ್ದು ಚೇತರಿಸಿಕೊಂಡೆ. ಈಗ ನಾನು ಚೆನ್ನಾಗಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಅವರು ಅಭಿಮಾನಿಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ತುಂಬಾ ದಿನಗಳಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದೇನೆ. ಇದಕ್ಕೆ ಬಲವಾದ ಕಾರಣ ಕೂಡ ಇದೆ ಎನ್ನುವ ಮೂಲಕ ಇತ್ತೀಚೆಗಷ್ಟೇ ತನಗೆ ಅಪಘಾತವಾಯಿತು ಎಂದು ಇನ್‌ಸ್ಟಾಗ್ರಾಂನಲ್ಲಿ ರಶ್ಮಿಕಾ ಬಹಿರಂಗಪಡಿಸಿದ್ದಾರೆ.
ಒಂದು ತಿಂಗಳು ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರಲಿಲ್ಲ. ಸಣ್ಣ ಅಪಘಾತವೇ ಇದಕ್ಕೆ ಕಾರಣ. ವೈದ್ಯರ ಸಲಹೆಯಂತೆ ನಾನು ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದೇನೆ. ಸದ್ಯದಲ್ಲೇ ಮತ್ತೆ ಬಿಜಿಯಾಗುತ್ತೇನೆ. ಬದುಕು ಬಹಳ ಅಮೂಲ್ಯವಾಗಿದ್ದು, ತುಂಬಾ ಹುಷಾರಾಗಿರಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. ಜೀವನದಲ್ಲಿ ಏನಾಗುತ್ತದೆ ಎಂದು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಏಕೆಂದರೆ, ಜೀವನ ತುಂಬಾ ಅನಿರೀಕ್ಷಿತವಾಗಿದೆ. ನಾಳೆ ಇರುತ್ತೋ ಇಲ್ಲವೋ ಗೊತ್ತಿಲ್ಲ, ನೆಮ್ಮದಿಯಿಂದ ಬದುಕಬೇಕು ಎಂದು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ರಶ್ಮಿಕಾ ಬರೆದುಕೊಂಡಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಅಪ್ಡೇಟ್ ಕೊಡುವುದಾಗಿ ತಿಳಿಸಿದ್ದಾರೆ.
You must be logged in to post a comment Login