Connect with us

KARNATAKA

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ರೇವಣ್ಣನ ಇನ್ನೊಬ್ಬ ಮಗ ಸೂರಜ್ ರೇವಣ್ಣ ಅರೆಸ್ಟ್

ಹಾಸನ ಜೂನ್ 23 : ಎಚ್ ಡಿ ದೇವೆಗೌಡ ಅವರ ಕುಟುಂಬದಲ್ಲಿ ಇದೀಗ ಬರೀ ಸಮಸ್ಯೆಗಳ ಸರಮಾಲೆಯೇ ಬರುತ್ತಿದೆ. ಹೆಚ್ ಡಿ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾದರೆ ಇದೀಗ ಅವರ ಇನ್ನೊಬ್ಬ ಮಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.


ಯುವಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರ ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.

ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕು‌ಮಾರ್, ಸೂರಜ್ ಅವರನ್ನು ಬಂಧಿಸಿದ್ದು, ಮಧ್ಯಾಹ್ನ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ‌. ಶನಿವಾರ ರಾತ್ರಿ 7.30 ರ ಸಮಯದಲ್ಲಿ ಸಿಇಎನ್ ಪೊಲೀಸ್ ಠಾಣೆಗೆ ಡಾ.ಸೂರಜ್‌ರೇವಣ್ಣ ಅವರನ್ನು ಕರೆ ತಂದಿದ್ದ ಪೊಲೀಸರು ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.
ರಾತ್ರಿ ಪೊಲೀಸ್ ಠಾಣೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿ ತೆರಳಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *