Connect with us

KARNATAKA

ಹಿರಿಯ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ

ಬೆಂಗಳೂರು ನವೆಂಬರ 13 : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಇನ್ನಿಲ್ಲ.

ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದೆ.

1995ರಲ್ಲಿ ಹಾಯ್‌ ಬೆಂಗಳೂರು ಆರಂಭಿಸಿದ್ದರು. ಕಾದಂಬರಿ, ಅನುವಾದ, ಕಥಾ ಸಂಕಲನ, ಅಂಕಣ ಬರಹಗಳು, ಜೀವನ ಕಥನ ಒಳಗೊಂಡ ಅವರ ಸುಮಾರು 70 ಪುಸ್ತಕಗಳು ಪ್ರಕಟಗೊಂಡಿವೆ. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. 

ತನ್ನ ಬರಹದಿಂದಲೇ ಅಸಂಖ್ಯ ಅಭಿಮಾನಿಗಳನ್ನು ಹೊಂದಿದ್ದ ರವಿ ಅವರ ಮೃತದೇಹವನ್ನು ಬೆಳಗ್ಗೆ 9 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಬೆಂಗಳೂರಿನ ಪದ್ಮನಾಭನಗರದಲ್ಲಿರೋ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಅವರಿಗೆ ಇಬ್ಬರು ಪತ್ನಿಯರು, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಇದ್ದಾರೆ. 

Facebook Comments

comments