ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಂ ಲಕ್ಷ್ಮೀಪ್ರಸಾದ್ ನೇಮಕ

ಮಂಗಳೂರು ಡಿಸೆಂಬರ್ 31: ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಂ ಲಕ್ಷ್ಮೀಪ್ರಸಾದ್ ನೇಮಕಗೊಳಿಸಿ ಸಿಬ್ಬಂದಿ ಹಾಗೂ ಆಡಳಿತಾತ್ಮಕ ಸುಧಾರಣೆ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸದ್ಯ ಇರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಡಾ. ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಪೊಲೀಸ್ ಫೈರ್ ಸರ್ವಿಸಸ್ ವಿಭಾಗದ ಡಿಐಜಿ ಯಾಗಿ ಭಡ್ತಿ ಹೊಂದಿದ್ದಾರೆ.

ಡಾ. ಬಿ.ಆರ್. ರವಿಕಾಂತೇಗೌಡ ಅವರು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜನವರಿ 2018ರಲ್ಲಿ ಅಧಿಕಾರಿವಹಿಸಿಕೊಂಡಿದ್ದರು.
ಲಕ್ಷ್ಮಿಪ್ರಸಾದ್ ಈ ಮೊದಲು ಬೆಂಗಳೂರು ಆಂತರಿಕ ಭದ್ರತಾ ವಿಭಾಗ (ಸಿಸಿಟಿ-ಸೆಂಟರ್ ಫಾರ್ ಕೌಂಟರ್ ಟೆರರಿಸಂ)ದ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

4 Shares

Facebook Comments

comments