LATEST NEWS
ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರವಿರಾಜ್ ಹೆಗ್ಡೆ ರಾಜೀನಾಮೆ

ಮಂಗಳೂರು, ಮಾರ್ಚ್ 03: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೆ. ರವಿರಾಜ್ ಹೆಗ್ಡೆ ರಾಜೀನಾಮೆ ನೀಡಿದ್ದಾರೆ.
‘ಒಕ್ಕೂಟದ ಅಧ್ಯಕ್ಷನಾಗಿ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗಿದೆ. ಕೋವಿಡ್-19 ಸಂಕಷ್ಟದ ಪರಿಸ್ಥಿತಿಯನ್ನೂ ಸಮರ್ಥವಾಗಿ ನಿಭಾಯಿಸಲಾಗಿದೆ. ಹಾಲಿನ ಉತ್ಪಾದನೆಯಲ್ಲಿ ಸ್ವಾವಲಂಬಿ ಒಕ್ಕೂಟವಾಗಿ ಮೂಡಿ ಬಂದಿರುವ ಸಂತೃಪ್ತಿಯೊಂದಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.

‘ನನ್ನ ಅಧ್ಯಕ್ಷ ಅವಧಿಯಲ್ಲಿ ಸಹಕರಿಸಿದ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ ನೌಕರರು, ಡೀಲರ್‌ಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.