Connect with us

KARNATAKA

RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 10 ಸಾವು

ಬೆಂಗಳೂರು, ಜೂನ್​ 04: ಇದೇ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿರುವ ಆರ್ ಸಿಬಿ ಸಂಭ್ರಮಾಚರಣೆ  ದೊಡ್ಡ ದುರಂತಕ್ಕೆ ಸಾಕ್ಷಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭ ಉಂಟಾದ ಕಾಲ್ತುಳಿತಕ್ಕೆ 10ಕ್ಕೂಅಧಿಕ ಮಂದಿ ಅಭಿಮಾನಿಗಳು ಸಾವನಪ್ಪಿದ್ದಾರೆ.

ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 10 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ನೂಕುನುಗ್ಗಲಿನಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಓರ್ವ ಮಗು, ಆರು ಪುರುಷರು, ಮೂರು ಮಹಿಳೆಯರು ಸೇರಿದಂತೆ 10 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.  ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ.  ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

Share Information
Continue Reading
Advertisement
3 Comments

3 Comments

    Leave a Reply

    Your email address will not be published. Required fields are marked *