Connect with us

LATEST NEWS

ಉಡುಪಿಯಲ್ಲಿ ನಡೆದ ಕಾಂತಾರದ ನಿಜ ಘಟನೆ – ಕೋರ್ಟ್​ಗೆ ಹೋಗ್ತಿ, ಆದರೆ ನಿನ್ನ ತೀರ್ಮಾನ ಮೆಟ್ಲಲ್ಲಿ ನಾನು ಮಾಡುತ್ತೇನೆ

ಉಡುಪಿ ಜನವರಿ 07: ಕಾಂತಾರ ಸಿನೆಮಾದ ಪ್ರಾರಂಭದಲ್ಲಿ ಬರುವ ಪಂಜುರ್ಲಿ ದೈವದ ಸನ್ನಿವೇಶದ ನಿಜವಾದ ಘಟನೆ ಕಾಪು ತಾಲೂಕು ಪಡುಬಿದ್ರಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಗ್ರಾಮದಲ್ಲಿ ದೈವಕೋಲದ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ದೈವದ ತಂಬಿಲ ಸೇವೆ ಸಂದರ್ಭದಲ್ಲಿ ಸ್ಥಾನದ ಎದುರೇ ಕುಸಿದುಬಿದ್ದು ಸಾವನ್ನಪ್ಪಿದ್ದು, ಊರ ಜನರನ್ನು ದಿಗ್ಬ್ರಮೆಗೊಳಿಸಿದೆ.


ಪಡುಹಿತ್ಲು ಜಾರಂದಾಯ ದೈವಸ್ಥಾನದ ನೇಮೋತ್ಸವ ವಿಚಾರದಲ್ಲಿ ತಗಾದೆ ಇತ್ತು. 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದಲ್ಲಿ ಸಮಸ್ತರ ಪರವಾಗಿ ಒಂದು ಭಕ್ತ ಸಮಿತಿ ಇತ್ತು. ಈ ಸಮಿತಿಯಲ್ಲಿ ಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿದ್ದರು ಈ ನಡುವೆ ಸಮಿತಿ ಬದಲಾದಾಗ ಪ್ರಕಾಶ್ ಶೆಟ್ಟಿ ಸಹಜವಾಗಿ ಅಧಿಕಾರ ಕಳೆದುಕೊಂಡಿದ್ದಾರೆ.

ಆದರೆ ಮತ್ತೆ ಅಧಿಕಾರ ಪಡೆಯಬೇಕೆಂಬ ಹಠದಿಂದ ಪ್ರಕಾಶ್ ಶೆಟ್ಟಿ ಪ್ರತ್ಯೇಕ ಟ್ರಸ್ಟ್ ರಚಿಸಿದ ಬಂಡಾರ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ. ಹೀಗೆ 9 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸ್ತಾರೆ. ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.


ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ, ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ‌ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಇದೀಗ ಜನವರಿ 7ಕ್ಕೆ ನಡೆಯಬೇಕಿದ್ದ ನೇಮೋತ್ಸವವನ್ನು ದೈವಸ್ಥಾನ‌ ಸಮಿತಿ‌ ಜಯ ಪೂಜಾರಿ ದೈವದೀನರಾದ ಕಾರಣಕ್ಕೆ ಮುಂದೂಡಿದೆ. ಆದರೆ ಹಠ ಬಿಡದ ಪ್ರಕಾಶ್ ಶೆಟ್ಟಿ ಮತ್ತು ತಂಡ ಜಯ ಪೂಜಾರಿಯವರ ಉತ್ತರಕ್ರಿಯೆಯ ದಿನವಾದ ಜ.7 ರಂದೇ ಕಾಲಾವಧಿ ನೇಮೋತ್ಸವ ಮಾಡಲು ಹೊರಟಿದೆ. ಕೋರ್ಟ್​​ನಲ್ಲಿ ತಡೆಯಾಜ್ಞೆ ತೆರವಾಗಿದ್ದರೂ ಊರವರ ವಿರುದ್ಧ ಹೊರಟಿರುವ ಪ್ರಕಾಶ್ ಶೆಟ್ಟಿ ಮತ್ತು ತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಊರ ಸಮಸ್ತರು ಸಭೆ ಸೇರಿ 500 ವರ್ಷಗಳ ಇತಿಹಾಸ ಇರುವ ಜಾರಂದಾಯ ಬಂಟ ಸೇವಾ ಸಮಿತಿ ಮಾಡುವ ನಿರ್ಣಯಕ್ಕೆ ಬದ್ಧ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *