LATEST NEWS
ಮಂಗಳೂರಿನಲ್ಲಿ ಬಿಜೆಪಿ ಬಂಡಾಯದ ಉತ್ತರ..!!

ಮಂಗಳೂರಿನಲ್ಲಿ ಬಿಜೆಪಿ ಬಂಡಾಯದ ಉತ್ತರ..!!
ಮಂಗಳೂರು, ಎಪ್ರಿಲ್ 21 : ಮಂಗಳೂರು ಉತ್ತರ ಕೇತ್ರದ ಬಿಜೆಪಿ ಪಾಳಯದಲ್ಲಿ ಬಂಡಾಯದ ಗಾಳಿ ಬೀಸುತ್ತಿದೆ. ಬಿಜೆಪಿ ಹೈಕಮಾಂಡ್ ಶುಕ್ರವಾರ ಚುನಾವಣೆಯಲ್ಲಿ ಸ್ಪರ್ಧಿಸುವ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಮೂರನೇ ಪಟ್ಟಿಯಲ್ಲಿ ಬಹು ನಿರೀಕ್ಷಿತ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರ ಹೆಸರನ್ನು ಕೈ ಬಿಡಲಾಗಿದೆ.

ಡಾ. ವೈ. ಭರತ್ ಶೆಟ್ಟಿ ಅವರನ್ನು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.
ಇದು ಉತ್ತರ ಕ್ಷೇತ್ರದ ಬಿಜೆಪಿ ಪಾಳಯದಲ್ಲಿ ಭಿನ್ನ ಮತಕ್ಕೆ ಕಾರಣವಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಈ ಕ್ಷೇತ್ರದಲ್ಲಿ ಓಡಾಟ ಮಾಡಿಕೊಂಡು ಪಕ್ಷ ಸಂಘಟನೆ ಮತ್ತು ವಿಧಾನ ಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದ ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಅವರ ಹೆಸರನ್ನು ಕೊನೆ ಕ್ಷಣದಲ್ಲಿ ಕೈ ಬಿಟ್ಟಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
ಪಾಲೆಮಾರ್ ಹೆಸರು ಕೈ ಬಿಟ್ಟ ಸ್ಪಷ್ಟ ಕಾರಣಗಳನ್ನು ನೀಡಲಾಗಿಲ್ಲ.
ಪಾಲೇಮಾರ್ ಅವರ ಹೆಸರನ್ನು ಕೈ ಬಿಟ್ಟಿರುವುದಕ್ಕೆ ಪಾಲೇಮಾರ್ ಅಭಿಮಾನಿಗಳು ಸಹಜವಾಗಿಯೇ ಸಿಟ್ಟಾಗಿದ್ದು, ಬಿಜೆಪಿ ವರಿಷ್ಟರ ವಿರುದ್ದ ಬಹಿರಂಗವಾಗಿಯೇ ತಮ್ಮ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಮತ್ತೊಂದೆಡೆ ಇದೇ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದರು ಸತ್ಯಜೀತ್ ಸುರತ್ಕಲ್.
ಸಂಘ ಪರಿವಾರದ ಸಕ್ರೀಯ ಕಾರ್ಯಕರ್ತ ಹಾಗೂ ಬಿಜೆಪಿ ಮುಖಂಡರಾಗಿರುವ ಸತ್ಯಜೀತ್ ಸುರತ್ಕಲ್ ಅವರಿಗೂ ಈ ಬಾರಿ ಟಿಕೇಟ್ ಸಿಗುವ ಸಾಧ್ಯತೆಗಳಿದ್ದುವು,
ಆದರೆ ಅವರಿಗೂ ಈ ಬಾರಿ ನಿರಾಸೆಯಾಗಿದ್ದು, ಬಿಜೆಪಿ ವರಿಷ್ಟರ ನಡೆಯ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿನ್ನೆ ರಾತ್ರಿ ಸತ್ಯಜೀತ್ ಅವರ ಮನೆಯಲ್ಲಿ ಬೆಂಬಲಿಗರು ಸಭೆ ನಡೆಸಿದ್ದು, ಬಿಜೆಪಿ ವರಿಷ್ಟರ ನಡೆಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಮತ್ತ ಪಕ್ಷೇತರರಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸತ್ಯಜೀತ್ ಅವರ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮುಂದಿನ ಒಂದೆರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಭೆಯಲ್ಲಿ ಬೆಂಬಲಿಗರಿಗೆ ಸತ್ಯಜೀತ್ ಅವರು ಹೇಳಿದ್ದಾರೆ ಎಂದು ತಿಳಿದು ಬಂದಿದ್ದು,
ಒಟ್ಟಾರೆಯಾಗಿ ಬಿಜೆಪಿಗೆ ಇತ್ತಿಚಿನ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಮಾನಗಳು ಚುನಾವಣೆಯಲ್ಲಿ ಮುಳುವಾಗುವುದರಲ್ಲಿ ಸಂದೇಹವಿಲ್ಲ.