ಟಿಕೆಟ್ ನೀಡಿದ ಅಸಮಾಧಾನ:ಕಾಂಗ್ರೆಸ್ ತೊರೆದು ಸ್ಪರ್ಧಿಸಲು ಅಮೃತ್ ಶೆಣೈ ನಿರ್ಧಾರ

ಉಡುಪಿ, ಮಾರ್ಚ್ 23: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡಿದ ಹಿನ್ನೆಲೆ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರು ತಮ್ಮ ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಮೃತ್ ಶೆಣೈಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ತೀವ್ರ ಅಸಮಾಧಾನಗೊಂಡಿದ್ದಾರೆ,

ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಪಕ್ಷೇತರವಾಗಿ ನಿಲ್ಲಲು ತೀರ್ಮಾನಿಸಿದ್ದು ಅಂತಿಮ ತೀರ್ಮಾನ ನಾಳೆ ತಗೊಳ್ಳಲಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆನೂ ಆಪ್ತರರಲ್ಲಿ ಸಮಾಲೋಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಅಮೃತ್ ಶೆಣೈ ಮನವೊಲಿಸಲು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಹಿತ ಅನೇಕ ಕೈ ಮುಖಂಡರ ಕಸರತ್ತು ನಡೆಸುತ್ತಿದ್ದಾರೆ.

Facebook Comments

comments