Connect with us

    LATEST NEWS

    ರೆಡ್ ಅಲರ್ಟ್ – ನಾಳೆ (ಜುಲೈ 25) ರಂದು ದಕ್ಷಿಣಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ…!!

    ಮಂಗಳೂರು ಜುಲೈ 24: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಭಾರೀ ಮಳೆಯಾಗಿದೆ. ಅಲ್ಲದೆ ಜಿಲ್ಲೆಯ ತಗ್ಗು ಪ್ರದೇಶಗಳು ನೆರೆ ಆವೃತವಾಗಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 25) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯೂ ಭಾರೀ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ , ಪದವಿ ಪೂರ್ವ ಕಾಲೇಜು , ಪದವಿ ಶಿಕ್ಷಣ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿಧ್ಯಾಸಂಸ್ಥೆಗಳಿಗೆ ನಾಳೆ (ಜುಲೈ 25) ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.

     

    ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 25ರಂದು ಮಂಗಳವಾರ ನಡೆಯಬೇಕಿದ್ದ ಮಂಗಳೂರು ವಿ.ವಿ. ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕ ಮರುನಿಗದಿಗೊಳಿಸಿ ಸಂಯೋಜಿತ ಕಾಲೇಜುಗಳಿಗೆ ತಿಳಿಸಲಾಗುವುದು ಎಂದು ವಿ.ವಿ. ಪ್ರಕಟಣೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply