LATEST NEWS
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 2 ದಿನ ರೆಡ್ ಅಲರ್ಟ್ ಘೋಷಣೆ..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯೂ ಮಳೆ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸ್ವಲ್ಪ ಬಿಡುವು ನೀಡಿದೆ. ನಗರದ ಜಪ್ಪಿನ ಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲೂ ಶುಕ್ರವಾರ ರಾತ್ರಿ ಮಳೆಯಾಗಿದ್ದು, ಬಂಟ್ವಾಳ ಪೇಟೆ ಹಾಗೂ ಬಿಸಿ ರೋಡ್ ಮಧ್ಯೆ ನೀರು ನಿಂತಿತ್ತು. ನೇತ್ರಾವತಿ ನದಿ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹೆಚ್ಚು ಮಳೆಯಾಗಲಿದೆ. ರಾಜ್ಯದೆಲ್ಲೆಡೆ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ. ಮುಂದಿನ ಎರಡು ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. 15 ರಿಂದ 20 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಹೆಚ್ಚಾಗಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತ್ಯಧಿಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ಸಮುದ್ರದ ತೀರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು ಎಚ್ಚರಿಕೆಂದ ಇರುವಂತೆ ಸ್ಥಳೀಯ ಆಡಳಿತಗಳು ಕಡಲ ತೀರದ ಜನರಿಗೆ ಎಚ್ಚರಿಕೆ ನೀಡಿದೆ.