Connect with us

    LATEST NEWS

    ಕರಾವಳಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ – ಭಾರಿ ಮಳೆ ಸಾಧ್ಯತೆ

    ಮಂಗಳೂರು ಜುಲೈ 05 : ಮುಂಗಾರು ಮಳೆ ತನ್ನ ಅಬ್ಬರ ತೋರಿಸುತ್ತಿದ್ದು. ಕರವಾಳಿ ಜಿಲ್ಲೆಗಳಾದ ಉಡುಪಿ ದಕ್ಷಿಣಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಅಬ್ಬರ ಜೋರಾಗಿದೆ. ಈ ನಡುವೆ ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಸಿದ್ದು, ರೆಡ್ ಅಲರ್ಟ್ ಘೋಷಿಸಿದೆ.


    ಮುಂದಿನ 48 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಹಾಗೂ ಅಲ್ಲಿನ ಭಾಗಗಳಿಗೆ ಜೂನ್ 7 ರಿಂದ 9 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30 ರಿಂದ 40 ಕಿಲೋಮೀಟರ್ ಪ್ರತಿ ಘಂಟೆಗೆ ಇರಲಿದ್ದು, ಅಲ್ಲಿಯೂ ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ ಎಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply