LATEST NEWS
ಉಡುಪಿ : ಸೆಪ್ಟೆಂಬರ್ 7 ರಂದು ರೆಡ್ ಅಲರ್ಟ್ ಘೋಷಣೆ
ಉಡುಪಿ, ಸೆಪ್ಟೆಂಬರ್ 6: ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದ್ದು, ಸೆಪ್ಟೆಂಬರ್ 7 ರಂದು ರೆಡ್ ಅಲರ್ಟ್ ಹಾಗೂ ಮೂರು ದಿನ ಆರೆಂಜ್ ಅಲರ್ಟ್ ನ್ನು ಘೋಷಿಸಿದೆ.
ಬುಧವಾರದಿಂದ ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 7ರಿಂದ 10ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ. ಮಳೆ ಸುರಿಯುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.
You must be logged in to post a comment Login