Connect with us

LATEST NEWS

ರೆಡ್ ಅಲರ್ಟ್ ಹಿನ್ನಲೆ ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪಿಯುಸಿವರೆಗೆ ನಾಳೆ ಜುಲೈ 16 ರಂದು ರಜೆ ಘೋಷಣೆ

ಮಂಗಳೂರು ಜುಲೈ 15: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು , ನಾಳೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ತನಕದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಈ ಬಗ್ಗೆ ಎರಡು ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆ ಮಂಗಳವಾರ (ಜುಲೈ 16 ರಂದು) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ತನಕದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.

ದಕ್ಷಿಣ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆ ಮಂಗಳವಾರ (ಜುಲೈ 16 ರಂದು) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ತನಕದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *