DAKSHINA KANNADA
ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ: ನಾನು ಭಾರತವನ್ನು ದ್ವೇಷಿಸುತ್ತೇನೆ – ಮಂಗಳೂರು ವೈದ್ಯೆಯ ದೇಶ ವಿರೋಧಿ ಪೋಸ್ಟ್

ಮಂಗಳೂರು, ಏಪ್ರಿಲ್ 29: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ ರಿಂದ ವಿವಾದಾತ್ಮಕ ಪೋಸ್ಟ್ HELP STINKY HINDUS BEHIMD ME (ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ) AM I INDIAN- YES, DO I HATE INDIA – YES, ( ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ) ಎಂದು ಸಾಮಾಜಿಕ ಜಾಲತಾಣ ದಲ್ಲಿ ಪೋಸ್ಟ್ ಮಾಡಿದ್ದ ಅಫೀಫ ಫಾತೀಮಾ.

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್ಆರ್ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್ಎಸ್ ಕಲಂ 196(1)(a), 353(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮಂಗಳೂರಿನ ಹೈಲ್ಯಾಂಡ್ ನ ಖಾಸಗಿ ಆಸ್ಪತ್ರೆಯ ವೈದ್ಯೆಯ ದೇಶ ಹಾಗೂ ಹಿಂದೂ ವಿರೋಧಿ ಬರವಣಿಗೆಯ ಬಗ್ಗೆ ಮಂಗಳೂರು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ವೈದ್ಯೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ವಿಹೆಚ್ಪಿ ಮುಖಂಡ ಶರಣ್ ಕುಮಾರ್ ಪಂಪ್ವೆಲ್ ಆಗ್ರಹಿಸಿದ್ದಾರೆ.