Connect with us

    LATEST NEWS

    ಜಿಲ್ಲೆಯಲ್ಲಿರುವ ಅನಧಿಕೃತ ಬ್ಯಾನರ್ ತೆರವುಗೊಳಿಸಿ : ಡಾ ಸಸಿಕಾಂತ್ ಸೆಂಥಿಲ್

    ಜಿಲ್ಲೆಯಲ್ಲಿರುವ ಅನಧಿಕೃತ ಬ್ಯಾನರ್ ತೆರವುಗೊಳಿಸಿ : ಡಾ ಸಸಿಕಾಂತ್ ಸೆಂಥಿಲ್

    ಮಂಗಳೂರು ಫೆಬ್ರವರಿ 09 : ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಠಿಯಿಂದ ನಗರದಲ್ಲಿ ಅನಧಿಕೃತವಾಗಿರುವ ಬ್ಯಾನರ್‍ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

    ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‍ಹಾಲ್‍ನಲ್ಲಿ ನಡೆದ ಅಧಿಕಾರಿಗಳ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಇನ್ನೆರಡು ತಿಂಗಳು ಜಿಲ್ಲೆಯ ವಿವಿಧ ಕಡೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಉತ್ಸವಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯನ್ನು ಪಡೆದು ಬಂಟಿಂಗ್ಸ್ ಗಳನ್ನು ಹಾಕಲು ಸೂಚನೆಯನ್ನು ನೀಡಿದ್ದಾರೆ. ಅನುಮತಿ ಪಡೆಯದೇ ಇರುವವರ ಮೇಲೆ ಕ್ರಮಕೈಗೊಳ್ಳಲು ಹಾಗೂ ಅಂತಹ ಬ್ಯಾನರ್‍ಗಳನ್ನು ಮತ್ತು ಅವಧಿ ಮೀರಿದ ಬ್ಯಾನರ್‍ಗಳನ್ನು ಮುಲಾಜಿಲ್ಲದೇ ತೆರವುಗೊಳಿಸಲು ಸೂಚಿಸಿದ್ದಾರೆ.

    ಚುನಾವಣೆಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು ಚುನಾವಣಾ ದಿನಾಂಕ ಪ್ರಕಟವಾಗುವ ಮುಂಚೆ ಎಲ್ಲಾ ಅನಧಿಕೃತ ಬ್ಯಾನರ್‍ಗಳನ್ನು ತೆರವುಗೊಳಿಸಿ ಶಾಂತಿಯುತವಾಗಿ ಚುನಾವಣೆಯನ್ನು ನಡೆಸಲು ತೀರ್ಮಾನಿಸಲಾಗಿದೆ.

    ಅಲ್ಲದೇ ಈ ವರ್ಷವೂ ವಿದ್ಯುನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯಲಿದ್ದು, ಇದಕ್ಕೆ ಪೂರಕವಾಗಿ ವಿವಿ ಪ್ಯಾಟ್‍ಗಳನ್ನು ಬಳಸುತ್ತಿದ್ದು ಇದರಲ್ಲಿ ಯಾವುದೇ ಲೋಪದೋಷಗಳು ನಡೆಯದಂತೆ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸಲು ಸಹಕರಿಸಬೇಕೆಂದು ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮತ ಎಣಿಕೆ ಗೊಂದಲ ಮಾಡಿದರೆ ಈ ಮುದ್ರಣವನ್ನು ಮತ್ತೊಮ್ಮೆ ಎಣಿಕೆ ಮಾಡಲು ಅವಕಾಶವಿದ್ದು ಇಲ್ಲಿ ಗೊಂದಲಕ್ಕೆ ಅವಕಾಶವಿರುವುದಿಲ್ಲ.

    ಒಂದು ವೇಳೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದರೆ ಹಾಗೂ ಕರ್ತವ್ಯ ವೇಳೆಯಲ್ಲಿ ಮೊಬೈಲ್ ಫೋನ್‍ಗಳನ್ನು ಬಳಸಿದ್ದು ಕಂಡುಬಂದಲ್ಲಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.

    ಪ್ರಸಕ್ತ ವರ್ಷದಲ್ಲಿ ಆನ್‍ಲೈನ್ ಪೋರ್ಟಲ್‍ಗಳ ಮೂಲಕ ಅಂಕಿ ಅಂಶಗಳನ್ನು ದಾಖಲಿಸಬೇಕಾಗಿರುವುದರಿಂದ ಪ್ರತಿ ತಾಲೂಕಿನಲ್ಲಿ ಕಂಟ್ರೋಲ್ ರೂಂ ಗಳನ್ನು ರಚಿಸಿ ಡಾಟಾ ಎಂಟ್ರಿ ಆಪರೇಟರ್‍ಗಳ ಮೂಲಕ ಕಾರ್ಯ ನಿರ್ವಹಿಸಲಾಗುವುದು. ಚುನಾವಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಲು ಸಹಕರಿಸಬೇಕು ಎಂದರು. ಮತದಾನದ ಮಾಹಿತಿಯನ್ನು ನೀಡಲು ಅನುಭವಿ ವೀಡೀಯೋಗ್ರಾಫರ್‍ಗಳನ್ನು ನೇಮಿಸಬೇಕೆಂದು ಸಲಹೆ ನೀಡಿದರು. ನೀತಿ ಸಂಹಿತೆ ಘೋಷನೆಯಾಗುತ್ತಿದ್ದಂತೆಯೇ ಎಲ್ಲ ಸರಕಾರಿ ಅಧಿಕಾರಿಗಳು, ನೌಕರರು ಚುನಾವಣಾ ಆಯೋಗಕ್ಕೆ ನಿಯೋಜನೆಗೊಳ್ಳಲಿದ್ದು, ಚುನಾವಣಾ ಕರ್ತವ್ಯವನ್ನು ಸೇವೆಯೆಂದು ಪರಿಗಣಿಸಬೇಕು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply