LATEST NEWS
ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ
ನವದೆಹಲಿ, ಆಗಸ್ಟ್ 30: ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ (72) ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ನಾವು ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಅಭಿಜಿತ್ ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ ಅಭಿಜಿತ್ ಸೇನ್ ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಅರ್ಥಶಾಸ್ತ್ರವನ್ನು ಬೋಧಿಸಿದರು. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಮುಖ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಭಿಜಿತ್ ಅವರು 2004 ರಿಂದ 2014 ರವರೆಗೆ ಯೋಜನಾ ಆಯೋಗದ ಸದಸ್ಯರಾಗಿದ್ದರು.