DAKSHINA KANNADA
ಖ್ಯಾತ ಹಿನ್ನಲೆ ಗಾಯಕಿ ಎಸ್ ಜಾನಕಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಫೆಬ್ರವರಿ 20: ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದ ಜಾನಕಿಯವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಎಸ್.ಜಾನಕಿ ಅವರಿಗೆ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹರೀಶ ಇಂಜಾಡಿ ಅವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.