LATEST NEWS
ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಆಸ್ಪತ್ರೆಗೆ ದಾಖಲು

ಮಂಗಳೂರು ಅಕ್ಟೋಬರ್ 07: ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಆರೋಪಿ ಡಾ.ರೇಣುಕಾ ಪ್ರಸಾದ್‌ನ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Renuka prasad
2011 ಎಪ್ರಿಲ್ 28ರಂದು ನಡೆದಿದ್ದ ಸುಳ್ಯ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ದಿ.ಕುರುಂಜಿ ವೆಂಕಟ್ರಮಣ ಗೌಡ ಅವರ ಪುತ್ರ ಡಾ.ರೇಣುಕಾ ಪ್ರಸಾದ್ ಗೆ ಕೋರ್ಟ್ ಜೀವಾವದಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿರುವ
ಮನೋಜ್ ರೈ, ಎಚ್.ಆರ್. ನಾಗೇಶ್, ಭವಾನಿ ಶಂಕರ್, ವಾಮನ ಪೂಜಾರಿ ಎಂಬವರಿಗೆ ಗುರುವಾರ ರಾಜ್ಯ ಹೈಕೊರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನೊಬ್ಬ ಪ್ರಮುಖ ಆರೋಪಿ ಆಕಾಶ್ ಭವನ್ ಶರಣ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಪ್ರಕರಣದಲ್ಲಿ ಏಳನೇ ಆರೋಪಿಯಾಗಿದ್ದ ಎಚ್.ಯು. ನಾಗೇಶ್ ಕುಮಾರ್ ಎಂಬಾತನನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಜೀವಾವಧಿ ಶಿಕ್ಷೆಗೊಳಗಾಗಿದ್ದ ಉಳಿದ ನಾಲ್ವರು ಅಪರಾಧಿಗಳು ಸದ್ಯ ಮಂಗಳೂರು ಸಬ್ ಜೈಲಿನಲ್ಲಿದ್ದು, ಶೀಘ್ರದಲ್ಲೇ ರಾಜ್ಯದ ಕೇಂದ್ರ ಜೈಲಿಗೆ ಕರೆದೊಯ್ಯುವ ಸಾಧ್ಯತೆಯಿದೆ
