FILM
ರೇಣುಕಾ ಸ್ವಾಮಿ ಕೊಲೆ ಪ್ರಕರಣ – ಚಾಲೆಂಜಿಂಗ್ ಸ್ಟಾರ್ ದರ್ಶನ ಪರಪ್ಪನ ಅಗ್ರಹಾರಕ್ಕೆ

ಬೆಂಗಳೂರು ಜೂನ್ 22: ತನ್ನದೇ ಅಭಿಮಾನಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ನೀಡಿ ಆದೇಶಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಮತ್ತೆ 24 ನೇ ಎಸಿಎಂಎಂ ಕೋರ್ಟ್‍ಗೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಆರೋಪಿಗಳಾದ ದರ್ಶನ್, ವಿನಯ್, ಧನರಾಜ್ ಹಾಗೂ ಪ್ರದೋಶ್ ನನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಇದುವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಪೈಕಿ 13 ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
