Connect with us

    LATEST NEWS

    ಬಾಂಗ್ಲಾದೇಶದ ಪ್ರಮುಖ ಹಿಂದೂ ಮುಖಂಡ ಇಸ್ಕಾನ್ ಸಂಸ್ಥೆಯ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಾಚಾರಿ ಅರೆಸ್ಟ್

    ಢಾಕಾ ನವೆಂಬರ್ 25: ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಪದತ್ಯಾಗದ ನಂತರ ಹಿಂದೂಗಳ ಮೇಲೆ ದಾಳಿ ಪ್ರಾರಂಭವಾಗಿದ್ದು, ಇದೀಗ ಹಿಂದೂಗಳ ಪರ ನಿಂತಿದ್ದ ಬಾಂಗ್ಲಾದೇಶದ ಪ್ರಮುಖ ಹಿಂದೂ ಮುಖಂಡ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ (Dhaka Airport) ಬಂಧಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.


    ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ದ ನಡೆಯುತ್ತಿರುವ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು, ಈ ಹಿನ್ನಲೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಇಂದು ಬಾಂಗ್ಲಾ ತೊರೆಯಲು ಮುಂದಾಗುತ್ತಿದ್ದಾಗ ) ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದು ಅರೆಸ್ಟ್ ಮಾಡಿದ್ದಾರೆ.

    ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂ ಸಂಘಟನೆಯಾದ ಇಸ್ಕಾನ್ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲರಾಗಿದ್ದಾರೆ. ಸನಾತನ ಜಾಗರಣ್‌ ಮಂಚ್‌, ಬಾಂಗ್ಲಾದೇಶ ಸನಾತನ ಜಾಗರಣ ಮಂಚ್‌ ವಕ್ತಾರರು ಮತ್ತು ಪುಂಡರೀಕ್ ಧಾಮದ ಪ್ರಾಂಶುಪಾಲರಾಗಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *