Connect with us

    LATEST NEWS

    ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೆಸ್ಟ್

    ಮುಂಬೈ ನವೆಂಬರ್ 4:ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ನಂತರ ಮುಂಬೈ ಪೊಲೀಸ್ ಹಾಗೂ ಪತ್ರಕರ್ತ ಅರ್ನಬ್ ಗೋಸ್ವಾಮಿ ನಡುವೆ ಮುಸುಕಿನ ಗುದ್ದಾಟ ಜೋರಾಗಿದ್ದು, ಇಂದು ಹಳೆಯ ಪ್ರಕರಣ ಒಂದರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.


    2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್‌ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

    ಆತ್ಮಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ದೊರೆತಿದ್ದ ಪತ್ರದಲ್ಲಿ, ‘ತಮಗೆ ಪಾವತಿಸಬೇಕಿದ್ದ ₹5.40ಗಳನ್ನು ಅರ್ನಬ್‌ ಗೋಸ್ವಾಮಿ ಪಾವತಿಸಿಲ್ಲ. ಆ ಕಾರಣ ನಮ್ಮ ಕುಟುಂಬ ತೀವ್ರ ಆರ್ಥಿಕ ತೊಂದರೆಗೆ ಒಳಗಾಯಿತು’ ಎಂದು ಅನ್ವಯ್‌ ನಾಯಕ್‌ ಬರೆದುಕೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಅಲಿಬಾಗ್‌ ಪೊಲೀಸರು 2018ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.  2020ರ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು. ಇಂದು ಮುಂಜಾನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತನೇ ದಾಳಿ ನಡೆಸಿದ್ದಾರೆ. ಈ ಸಂದರ್ಭ  ನಿವಾಸಕ್ಕೆ ಬಂದಿದ್ದ ಮಹಾರಾಷ್ಟ್ರ ಪೊಲೀಸರು ತಮ್ಮ ಹಾಗೂ ಕುಟುಂಬಸ್ಥರ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅರ್ನಬ್‌ ಗೋಸ್ವಾಮಿ ಆರೋಪಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply