Connect with us

    LATEST NEWS

    2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ ಡೊನಾಲ್ಡ್ ಟ್ರಂಪ್ ಮಡಿಲಿಗೆ, ಪ್ರಧಾನಿ ಮೋದಿ ಅಭಿನಂದನೆ..!!

    ವಾಷಿಂಗ್ಟನ್: ಭಾರಿ ಕೂತೂಹಲ ಕೆರಳಿಸಿದ್ದ ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದ್ದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್(Donald Trump) ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

    78 ವರ್ಷ ವಯಸ್ಸಿನ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಚುನಾಯಿತರಾದ ಅತ್ಯಂತ ಹಿರಿಯ ಅಧ್ಯಕ್ಷರಾಗಲಿದ್ದಾರೆ. ಅಧ್ಯಕ್ಷ ಜೋ ಬಿಡೆನ್ ಅವರು ಈ ಹಿಂದೆ 77 ನೇ ವಯಸ್ಸಿನಲ್ಲಿ ಚುನಾಯಿತರಾದ ಅತ್ಯಂತ ಹಳೆಯ ಅಧ್ಯಕ್ಷರಾಗಿದ್ದರು.  ಇದೀಗ  ಅವರು ಎರಡನೇ ಬಾರಿ ಅಮೆರಿಕ ಅಧ್ಯಕ್ಷರಾಗುತ್ತಿದ್ದಾರೆ. ಟ್ರಂಪ್ ಅವರು ಅನೇಕ ಫೆಡರಲ್ ಅಪರಾಧಗಳು ಮತ್ತು ಹಗರಣಗಳನ್ನು ಎದುರಿಸುತ್ತಿದ್ದಾರೆ.

    ಬಹುತೇಕ ಫಲಿತಾಂಶ ನಿರ್ಧಾರವಾಗಿರುವುದರಿಂದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಐತಿಹಾಸಿಕ ಭಾಷಣ ಮಾಡಿದ್ದಾರೆ. ಇದು ಹಿಂದೆಂದೂ ಯಾರೂ ನೋಡದ ಚಳವಳಿ. ನಾನೂ, ಇದು ಸಾರ್ವಕಾಲಿಕ ಶ್ರೇಷ್ಠ ರಾಜಕೀಯ ಚಳವಳಿ ಎಂದು ನಾನು ನಂಬುತ್ತೇನೆ. ಈ ದೇಶದ ಜನತೆಗೆ ಜೊತೆಗೆ ನಾನು ಯಾವತ್ತಿಗೂ ಇರುತ್ತೇನೆ. ನಾವು ನಮ್ಮ ಗಡಿಗಳನ್ನು ಸರಿಪಡಿಸಲು ಹೊರಟಿದ್ದೇವೆ, ನಮ್ಮ ದೇಶದ ವಿಚಾರಗಳನ್ನು ಸರಿಪಡಿಸಬೇಕಿದೆ. ನಾವು ಇಂದು ಇತಿಹಾಸವನ್ನು ನಿರ್ಮಿಸಿದ್ದೇವೆ, ಯಾರೂ ಯೋಚಿಸದ ಅಡೆತಡೆಗಳನ್ನು ನಾವು ಜಯಿಸಿದ್ದೇವೆ. ನಾವು ಹೆಚ್ಚಿನದನ್ನು ಸಾಧಿಸಿದ್ದು, ರಾಜಕೀಯ ಗೆಲುವಾಗಿದೆ ಎಂದರು.

    ಚುನಾವಣಾ ಪ್ರಚಾರ ವೇಳೆ ಡೊನಾಲ್ಡ್ ಟ್ರಂಪ್ ಮೇಲೆ ಸಾಕಷ್ಟು ಬಾರಿ ಹತ್ಯೆಯತ್ನ ನಡೆದಿತ್ತು, ಕೂದಲೆಳೆ ಅಂತರದಲ್ಲಿ ಅವರು ಬಚಾವಾಗಿದ್ದರು. ಅದನ್ನು ಸಹ ಇಂದಿನ ಭಾಷಣದಲ್ಲಿ ಟ್ರಂಪ್ ಪ್ರಸ್ತಾಪಿಸಿದರು. ದೇವರು ಒಂದು ಕಾರಣಕ್ಕಾಗಿ ನನ್ನ ಜೀವವನ್ನು ಉಳಿಸಿದನು. ಆ ಕಾರಣವು ನಮ್ಮ ದೇಶವನ್ನು ಉಳಿಸಲು ಮತ್ತು ಅಮೇರಿಕಾವನ್ನು ಶ್ರೇಷ್ಠತೆಗೆ ಮರುಸ್ಥಾಪಿಸಲು ಆಗಿತ್ತು. ಈಗ ನಾವು ಒಟ್ಟಾಗಿ ಆ ಮಿಷನ್ ನ್ನು ಪೂರೈಸಲಿದ್ದೇವೆ ಎಂದರು. ನಮ್ಮ ಮುಂದಿರುವ ಕೆಲಸವು ಸುಲಭವಲ್ಲ, ಆದರೆ ನೀವು ನನಗೆ ಒಪ್ಪಿಸಿದ ಕೆಲಸಕ್ಕೆ ನನ್ನ ಆತ್ಮದಲ್ಲಿರುವ ಪ್ರತಿಯೊಂದು ಶಕ್ತಿ, ಉತ್ಸಾಹ ಮತ್ತು ಹೋರಾಟವನ್ನು ನಾನು ತರುತ್ತೇನೆ ಎಂದರು.

    ಈ ಬೆಂಬಲಿಗರನ್ನು ಉದ್ದೇಶಿಸಿ ಟ್ರಂಪ್ ಮಾತನಾಡುವ ವೇಳೆ ಅವರ ಪತ್ನಿ ಮೆಲಾನಿಯಾ ಟ್ರಂಪ್, ಕಿರಿಯ ಮಗ ಬ್ಯಾರನ್ ಸೇರಿಕೊಂಡರು. ಟ್ರಂಪ್ ಅವರ ಹಿರಿಯ ಮಕ್ಕಳಾದ ಡಾನ್ ಜೂನಿಯರ್, ಎರಿಕ್, ಇವಾಂಕಾ ಮತ್ತು ಟಿಫಾನಿ ಅವರೆಲ್ಲರೂ ವೇದಿಕೆಯಲ್ಲಿ ತಮ್ಮ ತಂದೆಯ ಜೊತೆ ಸೇರಿಕೊಂಡರು. ಉನ್ನತ ಪ್ರಚಾರ ಸಲಹೆಗಾರರಾದ ಸೂಸಿ ವೈಲ್ಸ್ ಮತ್ತು ಕ್ರಿಸ್ ಲಾಸಿವಿಟಾ ಸೇರಿದಂತೆ ಟ್ರಂಪ್ ಅವರ ಉನ್ನತ ರಾಜಕೀಯ  ನಾಯಕರು ವೇದಿಕೆಯಲ್ಲಿ ಟ್ರಂಪ್ ಜೊತೆಗೂಡಿದರು. ಹೌಸ್ ಸ್ಪೀಕರ್ ಮೈಕ್ ಜಾನ್ಸನ್ ಸೇರಿದಂತೆ ಅವರ ರಾಜಕೀಯ ಮಿತ್ರರೂ ವೇದಿಕೆಯಲ್ಲಿದ್ದರು.

    ಪ್ರಧಾನಿ ಮೋದಿ ಅಭಿನಂದನೆ :

    ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ.

    ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ. ‘ನಿಮ್ಮ ಹಿಂದಿನ ಅವಧಿಯ ಯಶಸ್ಸಿನಂತೆಯೇ ಭಾರತ-ಅಮೆರಿಕ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಿಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

    https://x.com/narendramodi/status/1854075308472926675

     

    Share Information
    Advertisement
    Click to comment

    You must be logged in to post a comment Login

    Leave a Reply