KARNATAKA
ಆಂಧ್ರ ಮತ್ತು ತೆಲಂಗಾಣ ಬಳಿಕ ಇದೀಗ ರಾಜ್ಯದಲ್ಲೂ ರಂಜಾನ್ ಸಂದರ್ಭ ವಿನಾಯಿತಿಗೆ ಸಿಎಂಗೆ ಪತ್ರ

ಬೆಂಗಳೂರು ಫೆಬ್ರವರಿ 21: ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಮುಸ್ಲಿಂ ಸರಕಾರಿ ನೌಕರರಿಗೆ ರಂಜಾನ್ ಸಂದರ್ಭ ಉಪವಾಸ ತೊರೆಯಲು ಅನುಕೂಲವಾಗುವಂತೆ 1 ಗಂಟೆ ವಿನಾಯಿತಿಯನ್ನು ಘೋಷಿಸಲಾಗಿದೆ. ಅದೇ ರೀತಿ ಇದೀಗ ಕರ್ನಾಟಕದಲ್ಲೂ ವಿನಾಯಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್ ಅಹ್ಮದ್ ಮತ್ತು ನಜೀರ್ ಅಹ್ಮದ್ ಪತ್ರ ಬರೆದಿದ್ದಾರೆ.
ರಂಜಾನ್ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು (ಇಪ್ತಿಯಾರ್) ಅನುಮತಿ ನೀಡಲಾಗಿದೆ.”

ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಬಿಡಲು (ಇಪ್ತಿಯಾರ್) ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರದಲ್ಲಿ ಬರೆಯಲಾಗಿದೆ.