LATEST NEWS
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ಭೇಟಿಯಾದ ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ, ನವೆಂಬರ್ 26 : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನವದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿನ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿರುವ ರಾಜ್ಯದ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಬುಧವಾರ ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತರಾಮನ್ ಅವರನ್ನು ಭೇಟಿಯಾಗಿ ಮನದಟ್ಟು ಮಾಡಿದರು.

ಅತಿವೃಷ್ಟಿ, ರೋಗಬಾಧೆ ಮುಂತಾದ ಸಮಸ್ಯೆಗಳಿಂದ ಬಸವಳಿದ ಕಾಫಿ ಉದ್ಯಮವನ್ನು ಪುನಃಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅಗತ್ಯದ ಪರಿಹಾರ ಹಾಗೂ ಸಾಲ ನೀತಿಗಳನ್ನು ಬೆಳೆಗಾರರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕೈಗೊಳ್ಳಬೇಕು, ಬೆಳೆಗಾರರ ಸಂಕಷ್ಟಕ್ಕೆ ಸಹಾಯ ಮಾಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಕೇಳಿಕೊಂಡರು. ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರಕಾರ ಬದ್ಧವಾಗಿದೆ, ಈ ನಿಟ್ಟಿನಲ್ಲಿ ಅಗತ್ಯದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತರಾಮನ್ ಅವರು ಭರವಸೆಯನ್ನು ನೀಡಿದ್ದಾರೆ.