LATEST NEWS
ಬಾವಿಗೆ ಬಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ಬಾವಿಗೆ ಬಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ಉಡುಪಿ ಅಕ್ಟೋಬರ್ 7: ಕಾಡುಪ್ರಾಣಿಗಳು ನಾಡಿಗೆ ಬಂದು ಬಾವಿಗೆ ಬೀಳುವ ಘಟನೆಗಳು ಆಗಾಗ ನಡೆಯುತ್ತಾ ಇರುತ್ತೆ ಆದರೆ ಈ ಬಾರಿ ಭಾರೀ ಗಾತ್ರದ ಕಾಳಿಂಗ ಸರ್ಪ ಬಾವಿಗೆ ಬಿದ್ದಿದೆ.
ಕುಂದಾಪುರ ತಾಲೂಕಿನ ಸಿದ್ದಾಪುರದ ಅತ್ಮಿಜೆಡ್ಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಿಲ್ಲೆಯ ಕುಂದಾಪುರದಲ್ಲಿ ಕಾಳಿಂಗ ಸರ್ಪವೊಂದು ಬಾವಿಗೆ ಬಿದ್ದಿತ್ತು. ಆಯ ತಪ್ಪಿ ಬಾವಿಗೆ ಜಾರಿ ಬಿದ್ದಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನ ಇದೀಗ ರಕ್ಷಣೆ ಮಾಡಲಾಗಿದೆ.
ಚಂದ್ರ ಕೊಠಾರಿ ಅವರ ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವನ್ನ ಮೇಲೆ ಬರುವಂತೆ ಮಾಡಲು ಸ್ಥಳೀಯರು ಪ್ರಯತ್ನಪಟ್ಟಿದ್ದಾರೆ. ಸಾಧ್ಯವಾಗದ ಕಾರಣ ಶಂಕರನಾರಾಯಣ ವ್ಯಾಪ್ತಿಯ ಅರಣ್ಯ ಇಲಾಖೆ ಸಿಬ್ಬಂದಿ ಕೃಷ್ಣಮೂರ್ತಿ ಅವರನ್ನು ಕರೆಸಲಾಗಿದೆ.
ಸ್ಥಳಕ್ಕಾಗಮಿಸಿದ ಅವರು 13 ಅಡಿ ಉದ್ದದ 15 ಕೆ.ಜಿ ತೂಕದ ಬೃಹತ್ ಕಾಳಿಂಗ ಸರ್ಪವನ್ನು ರಕ್ಷಿಸಿದರು. ಕಾಳಿಂಗ ಸರ್ಪ ನೀರು ತುಂಬಿದ ಬಾವಿಯಲ್ಲಿ ಇದ್ದ ಕಾರಣ ಮೇಲಕ್ಕೆತ್ತಲು ಸ್ವಲ್ಪ ಪರಿಶ್ರಮ ಪಡಬೇಕಾಯಿತು. ಕಾಳಿಂಗವನ್ನು ಸುರಕ್ಷಿತವಾಗಿ ಪಶ್ಚಿಮಘಟ್ಟದ ಕಾಡಿಗೆ ಬಿಡಲಾಗಿದೆ.