Connect with us

    LATEST NEWS

    ಜೂನ್ 14 ರ ನಂತರ ಅನ್‌ಲಾಕ್ ಸಂದರ್ಭ ನಿರ್ದಿಷ್ಟಪಡಿಸಿದ ಚಟುವಟಿಕೆಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಜಿ.ಜಗದೀಶ್

    ಉಡುಪಿ ಜೂನ್ 12 : ಉಡುಪಿ ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ , ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.


    ಸೋಮವಾರ ದಿಂದ ಶುಕ್ರವಾರದ ವರೆಗೆ ಪ್ರತಿದಿನ ಬೆಳಗ್ಗೆ 6 ರಿಂದ 2 ಗಂಟೆಯವರೆಗೆ, ಎಲ್ಲಾ ಉತ್ಪಾದನಾ ಚಟುವಟಿಕೆ ನಿರ್ವಹಿಸುವ ಕೈಗಾರಿಕೆಗಳು, ಸಂಸ್ಥೆಗಳು ಶೇ.50 ರಷ್ಟು ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಬಹುದು. ಗಾರ್ಮೆಂಟ್ ಗಳಲ್ಲಿ ಮಾತ್ರ ಶೇ.30 ಸಿಬ್ಬಂದಿ ಕಾರ್ಯನಿರ್ವಹಿಸಬಹುದು. ಕಟ್ಟಡ ನಿರ್ಮಾಣ ಮತ್ತು ರಿಪೇರಿ ಚಟುವಟಿಕೆಗಳಿಗೆ ಅಗತ್ಯವಿರುವ ಕಟ್ಟಡ ಸಾಮಗ್ರಿ ಗಳಾದ ಸಿಮೆಂಟ್ , ಕಬ್ಬಿಣ ಸೇರಿದಂತೆ ಅಗತ್ಯವಿರುವ ವಸ್ತುಗಳ ಮಾರಾಟ ಮಳಿಗೆಗಳು ತೆರೆಯಲು ಅವಕಾಶವಿದೆ. ಆಹಾರ ಪದಾರ್ಥಗಳು, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸ ಡೈರಿ ಮತ್ತು ಹಾಲಿನ ಬೂತ್ ಗಳು ತೆರೆಯಲು ಮತ್ತು ಪಶು ಆಹಾರ ಮಾರಾಟಕ್ಕೆ ಅನುಮತಿ ನೀಡಲಾಗಿದೆ.

    ಬೀದಿ ಬದಿ ವ್ಯಾಪಾರಿಗಳು ಹಾಗೂ ಪಡಿತರ ಅಂಗಡಿಗಳು ಸಹ ಈ ಸಮಯದಲ್ಲಿ ಕಾರ್ಯನಿರ್ವಹಿಸಬಹುದು ಆದರೆ ಬೀದಿ ಬದಿ ವ್ಯಾಪಾರಿಗಳು ಯಾವುದೇ ಆಹಾರ ಪದಾರ್ಥಗಳನ್ನು ಮಾರುವಂತಿಲ್ಲ. ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಪಾರ್ಸೆಲ್ ಗೆ ಅವಕಾಶವಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿದೆ. ಹೋಂ ಡೆಲಿವರಿ ಸೇವೆ ಒದಗಿಸುವವರಿಗೆ ಈ ಹಿಂದಿನAತೆ ಯಾವುದೇ ನಿರ್ಭಂಧಗಳಿಲ್ಲ ಎಂದರು. ಇದನ್ನು ಹೊರತುಪಡಿಸಿ ಇತರೇ ಯವುದೇ ಅಂಗಡಿಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟವಾಗಿ ತಿಳಿಸಿದರು. ಟ್ಯಾಕ್ಸಿ ಮತ್ತು ಆಟೋದಲ್ಲಿ ಗರಿಷ್ಠ 2 ಪ್ರಯಾಣಿಕರು ಮಾತ್ರ ಸಂಚರಿಸಲು ಅನುಮತಿಯಿದೆ. ಕನ್ನಡಕದ ಅಂಗಡಿಗಳು ಬೆ.6 ರಿಂದ 10 ರ ವರೆಗೆ ತೆರೆಯಲು ಅವಕಾಶವಿದೆ ಎಂದರು.

    ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ರಾತ್ರಿ ನೈಟ್ ಕರ್ಫ್ಯೂ ಇರಲಿದ್ದು, ರಾತ್ರಿ 7 ಗಂಟೆಯಿಂದ ಮರುದಿನ ಬೆಳಗ್ಗೆ 5 ರ ವರೆಗೆ ಓಡಾಟವನ್ನು ನಿರ್ಭಂದಿಸಿದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಈ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು , ತುರ್ತು ಮತ್ತು ಅಗತ್ಯ ಸೇವೆ , ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆ ಒದಗಿಸುವ ಇಲಾಖೆಗಳು ಮತ್ತು ಕೈಗಾರಿಕೆ ಕಾರ್ಯನಿರ್ವಹಿಸಲು ಅನುಮತಿಯಿದ್ದು, ಈ ಕಚೇರಿಗಳ ಮತ್ತು ಸಂಸ್ಥೆಗಳ ನೌಕರರು ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು.

    ಆಹಾರ ಪದಾರ್ಥಗಳು, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸ ಡೈರಿ ಮತ್ತು ಹಾಲಿನ ಬೂತ್ ಗಳು ತೆರೆಯಲು ಮತ್ತು ಪಶು ಆಹಾರ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಹಾಗೂ ಪಡಿತರ ಅಂಗಡಿಗಳು ಸಹ ಈ ಸಮಯದಲ್ಲಿ ಕಾರ್ಯನಿರ್ವಹಿಸಬಹುದು ಆದರೆ ಬೀದಿ ಬದಿ ವ್ಯಾಪಾರಿಗಳು ಯಾವುದೇ ಆಹಾರ ಪದಾರ್ಥಗಳನ್ನು ಮಾರುವಂತಿಲ್ಲ. ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಪಾರ್ಸೆಲ್ ಗೆ ಅವಕಾಶವಿದೆ. ಹೋಂ ಡೆಲಿವರಿ ಸೇವೆ ಒದಗಿಸುವವರಿಗೆ ಈ ಹಿಂದಿನAತೆ ಯಾವುದೇ ನಿರ್ಭಂಧಗಳಿಲ್ಲ , ರೈಲು ಮತ್ತು ವಿಮಾನ ಪ್ರಯಾಣಕ್ಕೆ ತೆರಳುವವರು ಪ್ರಯಾಣದ ಟಿಕೆಟ್ ನೊಂದಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದರು.

    ಸೂಕ್ತ ಅನುಮತಿಯೊಂದಿಗೆ ಗರಿಷ್ಠ 40 ಮಂದಿ ಮೀರದಂತೆ ಮದುವೆಗಳನ್ನು , ಮನೆಗಳಲ್ಲಿ ನಡೆಸಲು ಅನುಮತಿಯಿದ್ದು, ಶವಸಂಸ್ಕಾರ ದಲ್ಲಿ ಗರಿಷ್ಠ 5 ಮಂದಿ ಮಾತ್ರ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾದಿಕಾರಿ ಜಿ.ಜಗದೀಶ್ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply