Connect with us

    DAKSHINA KANNADA

    ಆಗಸ್ಟ್ 8 ರವರೆಗೆ ಜಿಲ್ಲೆಯಲ್ಲಿ ನಿರ್ಬಂಧಗಳು ಜಾರಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

    ಮಂಗಳೂರು, ಆಗಸ್ಟ್ 06: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಆಗಸ್ಟ್ 05 ರಿಂದ 8ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಆ.05 ರಿಂದ 08 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಮುಚ್ಚುವುದು. ಮಾಲ್, ಚಿತ್ರಮಂದಿರಗಳು, ಪಬ್‍ಗಳನ್ನು ಜಿಲ್ಲೆಯಾದ್ಯಂತ ಆ.05 ರಿಂದ 08ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ರವರೆಗೆ ಮುಚ್ಚುವುದು.

    ಸಾರ್ವಜನಿಕರು ತುರ್ತು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯದಿಂದ ಹೊರಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ. ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್ಸು, ಅಟೋರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾಲಕ್ಕೆ ಅವಕಾಶವಿರುತ್ತದೆ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.

    ಜಿಲ್ಲೆಯಲ್ಲಿ ಎಲ್ಲಾ ಸಭೆ ಸಮಾರಂಭಗಳನ್ನು, ಸಾಂಸ್ಕಂತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ ಜಾತ್ರೆಗಳನ್ನು ಮುಂದೂಡುವುದು. ಮತ್ತು ಈಗಾಗಲೇ ನಿಗದಿಪಡಿಸಲಾಗಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವುದು. ಹೊಟೇಲ್, ಪಾರ್ಸೆಲ್ ವ್ಯವಸ್ಥೆ, ತುರ್ತು ವ್ಯವಸ್ಥೆಗಳಿಗೆ ಮಾತ್ರ ಅವಕಾಶವಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *