LATEST NEWS
ಆಂಧ್ರಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ನೇಮಕ
ಹೊಸದಿಲ್ಲಿ: ಮೂಡಬಿದಿರೆ ಮೂಲದ ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ.
ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರಾಗಿದ್ದು, ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದ ಎಸ್.ಅಬ್ದುಲ್ ನಜೀರ್ ಅವರು ಜನವರಿ 14ರಂದು ನಿವೃತ್ತರಾಗಿದ್ದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಲಯ ಸಂಕೀರ್ಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಜಸ್ಟಿಸ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದರು. ಫೆಬ್ರವರಿ 18, 1983 ರಂದು ವಕೀಲರಾಗಿ ನೋಂದಾಯಿಸಿಕೊಂಡರು. ಕರ್ನಾಟಕ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದ ಅವರು 2003ರ ಮೇ 12 ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
You must be logged in to post a comment Login