LATEST NEWS
ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಕಾಮಗಾರಿಯ ಪ್ರಗತಿ ಪರಿಶೀಲನೆ

ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಕಾಮಗಾರಿಯ ಪ್ರಗತಿ ಪರಿಶೀಲನೆ
ಮಂಗಳೂರು ಡಿಸೆಂಬರ್ 12:ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ವಿವಿಧ ಇಲಾಖೆಗಳ ಕಾಮಗಾರಿಯ ಕುರಿತು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಲೋಕೋಪಯೋಗಿ ಇಲಾಖೆ,ಪ್ರವಾಸೋದ್ಯಮ ಇಲಾಖೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತ ಇಲಾಖೆ ಹಾಗೂ ಮತ್ತಿತರ ಅಧಿಕಾರಿಗಳೊಂದಿಗೆ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಲಕ್ಷ್ಮಣ ಪೂಜಾರಿ, ರಮೇಶ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಉದಯ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಚಂದ್ರಕಾಂತ್,ಕರ್ನಾಟಕ ಮೂಲಭೂತ ಅಭಿವೃದ್ಧಿ ಪ್ರಾಧಿಕಾರದ ಮಹಾದೇವ ಪ್ರಸಾದ್, ರಮೇಶ್ ಶೆಟ್ಟಿ, ಅಲ್ಪ ಸಂಖ್ಯಾತ ಇಲಾಖೆಯ ಫಾರೂಕ್ ಉಪಸ್ಥಿತರಿದ್ದರು.