Connect with us

    FILM

    ಅಮೇರಿಕಾದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

    ಅಮೇರಿಕಾ ಜೂನ್ 28: ಕಾಂತಾರ ಸಿನೆಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ಯುನಿವರ್ಸಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಅಮೇರಿಕಾದಲ್ಲಿರುವ ಕನ್ನಡಿಗರು ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

    ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ ಈ ವೇಳೆ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕೂಡ ಹಾಜರಿದ್ದರು.


    ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply