LATEST NEWS
ರಿಷಬ್ ನಮ್ಮ ಸಿದ್ದಾಂತವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದ್ದಾರೆ – ಸಿಎಂ ಬೊಮ್ಮಾಯಿ

ಉಡುಪಿ ಎಪ್ರಿಲ್ 13: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ ಈ ವೇಳೆ ನಟ ನಿರ್ದೇಶಕ ರಿಷಬ್ ಶೆಟ್ಟಿಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದಾರೆ. ಇದೊಂದು ಅನಿರೀಕ್ಷಿತ ಭೇಟಿ ಎಂದು ಹೇಳಲಾಗಿದ್ದು, ಸಿಎಂ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಿಕ್ಕಿದ್ದು ಆಕಸ್ಮಿಕ. ನಾನು ಬರುವ ಮೊದಲೇ ರಿಷಬ್ ಶೆಟ್ಟಿ ದೇವಸ್ಥಾನದಲ್ಲಿ ಇದ್ದರು. ಹಾಗಾಗಿ ನಾವು ಜೊತೆಗೆ ಹೋಗಿ ದೇವರಿಗೆ ಪೂಜೆಯನ್ನು ಸಲ್ಲಿಸಿದ್ದೇವೆ. ಇದು ಯಾವುದು ಪೂರ್ವ ನಿರ್ಧರಿತ ಆಗಿರಲಿಲ್ಲ’ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಸಿಎಂ, ‘ನಮ್ಮ ಸಿದ್ದಾಂತಕ್ಕೂ ಅವರ ಸಿದ್ಧಾಂತಕ್ಕೂ ಬಹಳ ಸಾಮ್ಯತೆ ಇದೆ. ಈ ಹಿಂದೆ ಕೂಡ ರಿಷಬ್ ನಮ್ಮ ಸಿದ್ದಾಂತವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದ್ದಾರೆ. ರಿಷಬ್ ಶೆಟ್ಟಿಯ ವಿಚಾರಗಳು ಹಾಗೆ ಇದೆ. ಅದನ್ನು ಆಗಾಗ ಅವರು ಪ್ರಕಟಣೆ ಮಾಡಿದ್ದಾರೆ. ಅವರು ಕೊಲ್ಲೂರು ದೇಗುಲದ ಒಳಗೆ ಇದ್ದದ್ದು ನನಗೆ ಆಶ್ಚರ್ಯ ಆಯ್ತು. ಬಿಜೆಪಿ, ನಾಯಕತ್ವದ ಬಗ್ಗೆ ಅವರು ಒಲವಿರುವ ಮಾತುಗಳಾಡಿದವರು. ಪ್ರಚಾರಕ್ಕೆ ಬರುವ ಕುರಿತು ಈವರೆಗೆ ಯಾವುದೇ ಮಾತುಕತೆಗಳು ನಮ್ಮ ನಡುವೆ ನಡೆದಿಲ್ಲ. ಮುಂದೆ ಮೂಕಾಂಬಿಕೆ ಏನೆಂದು ಆಶೀರ್ವಾದ ಕೊಡುತ್ತಾಳೆ ನೋಡೋಣ’ ಎಂದರು.