DAKSHINA KANNADA
ಧರ್ಮಸ್ಥಳ ಶ್ರೀಮಂಜುನಾಥನ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ….!!

ಧರ್ಮಸ್ಥಳ ನವೆಂಬರ್ 2: ಇಡೀ ದೇಶವನ್ನೇ ಕನ್ನಡ ಚಲನಚಿತ್ರದ ಕಡೆ ನೋಡುವಂತೆ ಮಾಡಿದ್ದ ಕಾಂತಾರ ಚಲಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪತ್ನಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕಾಂತಾರ ಚಿತ್ರ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ರಿಷಬ್ ಅವರು ಇದೀಗ ಕಾಂತಾರ ಸೂಪರ್ ಹಿಟ್ ಆದ ಬಳಿಕ ಧರ್ಮಸ್ಥಳಕ್ಕೆ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಸಿನಿಮಾದ ಯಶಸ್ಸಿನ ಕುರಿತು ಮಾತುಕತೆ ನಡೆಸಿದರು. ಡಾ.ಹೆಗ್ಗಡೆಯವರು ಕ್ಷೇತ್ರದ ಪರವಾಗಿ ರಿಷಬ್ ದಂಪತಿಯನ್ನು ಅಭಿನಂದಿಸಿ ಗೌರವಿಸಿದರು.