LATEST NEWS
ಅಕ್ಟೋಬರ್ ತಿಂಗಳಲ್ಲಿ ಬರಲಿದೆ ಕಾಂತಾರ 2 – ಬಿಗ್ ಅಪ್ಡೆಟ್ ಕೊಟ್ಟ ರಿಷಬ್ ಶೆಟ್ಟಿ

ಮಂಗಳೂರು, ಮಾರ್ಚ್ 6 : ದೇಶದಲ್ಲಿ ಬಹು ನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ಕಾಂತಾರಾ ಚಾಪ್ಟರ್ 1 ರ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು , ಅಕ್ಟೋಬರ್ 2 ರಂದು ಬಿಡುಗಡೆ ಮಾಡುವ ಚಿಂತನೆ ಇದೆ ಎಂದು ಚಿತ್ರ ನಿರ್ದೇಶಕ ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

ಪತ್ನಿ ಮಕ್ಕಳೊಂದಿಗೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಕಾಂತಾರ 2 ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ. ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ಕರಾವಳಿಯ ಟೆಂಪಲ್ ರನ್ ನಲ್ಲಿರುವ ರಿಷಬ್ ಶೆಟ್ಟಿ ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.