FILM
ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ರಿಷಬ್ ಶೆಟ್ಟಿ ಭಾಷಣ

ಜಿನೆಮಾ ಮಾರ್ಚ್ 16: ಕಾಂತಾರ ಸಿನೆಮಾ ಮೂಲಕ ಇಡೀ ವಿಶ್ವವನ್ನೇ ಕನ್ನಡ ಸಿನೆಮಾದತ್ತ ತಿರುಗಿ ನೋಡುವಂತ ಮಾಡಿದ ನಟ ರಿಷಬ್ ಶೆಟ್ಟಿ ಇದೀಗ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪ್ರಚಲಿತ ವಿದ್ಯಮಾನಗಳ ಕುರಿತು ಮತ್ತು ಕಾಂತಾರ ಚಿತ್ರದ ಕುರಿತು ವಿಷಯ ಮಂಡಿಸಲಿದ್ದಾರೆ ಅದೂ ಕನ್ನಡದಲ್ಲಿ. ಈ ಮೂಲಕ ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಲಿರುವ ಮೊದಲ ಕನ್ನಡಿಗ ಎನ್ನಿಸಿಕೊಳ್ಳಲಿದ್ದಾರೆ.
ವಿಶ್ವಸಂಸ್ಥೆಯ ವಾರ್ಷಿಕ ಸಭೆ ಕಳೆದ ದಿನಗಳಿ೦ದ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂ ಡಿದ್ದಾರೆ. ಮಾತನಾಡಲಿದ್ದಾರೆ. ಸಭೆಯಲ್ಲಿ ಇದೀಗ ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆ ಗಳ ಬಗ್ಗೆ ಚರ್ಚೆ ನಡೆದಿದೆ. ಈ ವಾರ್ಷಿಕ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಸಹ ಭಾಗವಹಿಸಲಿದ್ದು, ಈ ವೇಳೆ ಅವರು ತಮ್ಮ ಸೂಪರ್ ಹಿಟ್ ‘ಕಾಂತಾರ’ದ ಬಗ್ಗೆ ಮಾತನಾಡಲಿದ್ದಾರೆ. ಇದಲ್ಲದೆ, ಭಾರತೀಯ ಸಿನಿಮಾ ಬೆಳೆದು ಬಂದ ಬಗೆ, ದೇಶದ ಸಂಸ್ಕೃತಿ, ಪರಿಸರ ರಕ್ಷಣೆ ಇತರ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

ಸಾಮಾನ್ಯವಾಗಿ ಈ ಸಭೆಯಲ್ಲಿ ಹೆಚ್ಚು ಇಂಗ್ಲಿಷ್ ಭಾಷೆಯನ್ನು ಬಳಸುವುದು ವಾಡಿಕೆ. ಆದರೆ, ರಿಷಬ್ ಈ ಸಭೆಯಲ್ಲಿ ಕನ್ನಡದಲ್ಲೇ (Kannada) ಭಾಷಣ ಮಾಡಲಿದ್ದಾರೆ. ಈ ಮೂಲಕ ಕನ್ನಡದಲ್ಲಿ ಭಾಷಣ ಮಾಡಿದ ಮೊದಲ ಕನ್ನಡಿಗ ಎಂಬ ಕೀರ್ತಿಗೂ ಪಾತ್ರರಾಗಲಿದ್ದಾರೆ.