FILM
ಚೇತನ್ ಹೇಳಿಕೆಗೆ ತಿರುಗೇಟು ಕೊಟ್ಟ ರಿಷಬ್ ಶೆಟ್ಟಿ …
ಬೆಂಗಳೂರು, ಅಕ್ಟೋಬರ್ 20: ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು, ಇದು ನಿಜವಲ್ಲ ಎಂದು ‘ಆ ದಿನಗಳು’ ಚೇತನ್ ಹೇಳಿದ್ದರು. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ರಿಷಬ್ ಶೆಟ್ಟಿ ಅವರು ಪರೋಕ್ಷವಾಗಿ ಚೇತನ್ಗೆ ತಿರುಗೇಟು ನೀಡಿದ್ದಾರೆ. ‘ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’ ಎಂಬ ಮಾತನ್ನು ರಿಷಬ್ ಹೇಳಿದ್ದಾರೆ.
‘ನಾನು ಈ ಸಿನಿಮಾ ಮಾಡಬೇಕಾದ್ರೆ ಮೂಲ ನಿವಾಸಿಗಳು ನನ್ನ ಜೊತೆಯಲ್ಲಿದ್ದರು. ಚಿಕ್ಕಂದಿನಿಂದಲೇ ನಾವು ದೈವ ನಂಬಿದ್ದೇವೆ. ಇಂಥದ್ದೊಂದು ಕತೆ ಹೇಳೋಕೆ ಹೋಗ್ತಿದ್ದೀನಿ ಎಂದಾಗ ಇಲ್ಲಿನ ಮೂಲ ಜನರಿಗೆ ನೋವಾಗಬಾರದು ಎಂದು ನಾನು ಬಯಸಿದ್ದೆ. ಎಲ್ಲೂ ದೈವ ದೇವಾದಿಗಳಿಗೆ, ಇದನ್ನು ಆರಾಧಿಸುವ ಜನರಿಗೆ ನೋವಾಗಬಾರದು, ಎಲ್ಲೂ ಕೂಡ ತಪ್ಪಾಗಬಾರದು ಎಂಬುದು ನನ್ನ ಉದ್ದೇಶ ಆಗಿತ್ತು’ ಎಂದಿದ್ದಾರೆ ರಿಷಬ್.
ಕಾಂತಾರದಲ್ಲಿ ಲೋಪ ಹುಡುಕಿದವನಿಗೆ ಲೋಪ
‘ಇದಕ್ಕೆ ಬೇಕಾದ ಎಲ್ಲಾ ಮುಂಜಾಗ್ರತೆಗಳನ್ನು ನಾನು ತೆಗೆದುಕೊಂಡಿದ್ದೆ. ನನ್ನ ಜೊತೆಯಲ್ಲೇ ಅವರನ್ನು ಇರಿಸಿಕೊಂಡು ಪ್ರತಿಯೊಂದು ಶಾಟ್ ತೆಗೆದಿದ್ದೇವೆ. ದೈವಾರಾಧನೆಗೆ ಸಂಬಂಧಿಸಿದ ಪ್ರತಿ ದೃಶ್ಯಗಳನ್ನು ಅಲ್ಲಿನ ಜನರಿಗೆ ತೋರಿಸುತ್ತಿದ್ದೆವು. ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ. ಆ ಬಗ್ಗೆ ನೋ ಕಾಮೆಂಟ್ಸ್. ಅದಕ್ಕೆ ಸಂಬಂಧ ಪಟ್ಟವರು ಮಾತನಾಡುತ್ತಾರೆ. ಅದಕ್ಕೆಲ್ಲಾ ನಾವೇಕೆ ತಲೆ ಕೆಡಿಸಿಕೊಳ್ಳಬೇಕು’ ಎಂದಿದ್ದಾರೆ ರಿಷಬ್.