DAKSHINA KANNADA
ರಸ್ತೆ ದಾಟುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರಿಗೆ ರಿಕ್ಷಾ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಸಾವು

ಪುತ್ತೂರು ಮೇ 09: ರಿಕ್ಷಾವೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ) ಎಂದು ಗುರುತಿಸಲಾಗಿದೆ.
ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರಗೆ ಗರ್ಬಿಣಿಯೊಬ್ವರನ್ನು ತಿಂಗಳ ಪರೀಕ್ಷೆಗೆಂದು ಕರೆದು ಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಮತ್ತೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಪಸ್ಟ್ ನ್ಯೂರೊ ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.
