LATEST NEWS
ಮೂಳೂರು – ರಸ್ತೆ ಬದಿ ನಡೆದುಕೊಂಡು ಹೊಗುತ್ತಿದ್ದ ಮಹಿಳೆಯ ಬಲಿ ಪಡೆದ ಕಾರು

ಉಡುಪಿ ಅಕ್ಟೋಬರ್ 23: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮೂಳೂರು ಯೂನಿಯನ್ ಬ್ಯಾಂಕ್ ಬಳಿ ಶನಿವಾರ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಮೂಳೂರು ಪಡು ನಿವಾಸಿ ಆಯಿಷಾ (42) ಎಂದು ಗುರುತಿಸಲಾಗಿದೆ.
ಇವರು ಮನೆಗೆ ದಿನಸಿ ಸಾಮಾಗ್ರಿ ಖರೀದಿಸಲೆಂದು ಪೇಟೆಗೆ ಬಂದಿದ್ದ ಅವರು ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರಿನತ್ತ ತೆರಳುತ್ತಿದ್ದ ಬೊಲೆನೋ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
