Connect with us

    KARNATAKA

    ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಕುಮಟಾ-ಶಿರಸಿ ನಡುವಿನ ರಾಷ್ಟ್ರೀಯ ಹೆದ್ದಾರಿ 766E ಬಂದ್

    ಶಿರಸಿ ನವೆಂಬರ್ 28: ರಾಷ್ಟ್ರೀಯ ಹೆದ್ದಾರಿ 766E ರಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ.
    ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್​ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರ ಸೂಚನೆ ಮೇರೆಗೆ ಎಸ್​ಪಿ ನಾರಾಯಣ ಈ ಕ್ರಮ ಕೈಗೊಂಡಿದ್ದಾರೆ. ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ 766Eನಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗುವುದು.

    ಶಿರಸಿ-ಕುಮಟಾ ಪ್ರಯಾಣಿಕರಿಗೆ ಸಿದ್ದಾಪುರ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಹಾಗೇ, ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ಯಲ್ಲಿ ಸಂಚರಿಸಬಹುದು. ಹಾಗೂ ರಾಜ್ಯ ಹೆದ್ದಾರಿ 93ರಲ್ಲಿ ಎಲ್ಲ ಮಾದರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *