DAKSHINA KANNADA
ಬೀದಿ ಕಾಳಗಕ್ಕೆ ನಾಂದಿಯಾದ ಕುಕ್ಕೆ ಮಠ ವಿವಾದ
ಬೀದಿ ಕಾಳಗಕ್ಕೆ ನಾಂದಿಯಾದ ಕುಕ್ಕೆ ಮಠ ವಿವಾದ
ಪುತ್ತೂರು ಅಕ್ಟೋಬರ್ 24: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಇದೀಗ ಬೀದಿ ಕಾಳಗದವರೆಗೂ ಬಂದು ಮುಟ್ಟಿದೆ.
ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎರಡು ಗುಂಪುಗಳ ನಡುವೆ ವೈಮನಸ್ಸು ಏರ್ಪಟ್ಟಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕಿಯೆಂದು ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಹಾಗೂ ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ನಡುವೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ವಾರ್ ನಿರಂತರವಾಗಿ ನಡೆಯುತ್ತಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ಗುರುಪ್ರಸಾದ್ ಪಂಜ ಅವರ ಅಂಗಡಿಗೆ ನುಗ್ಗಿ ಗುರುಪ್ರಸಾದ್ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಗುರುಪ್ರಸಾದ್ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ, ಚೈತ್ರಾ ಕುಂದಾಪುರ ಹಾಗೂ ಇತರ 8 ಜನರನ್ನು ಸುಬ್ರಹ್ಮಣ್ಯ ಪೋಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡೂ ಗುಂಪುಗಳನ್ನು ನಿಯಂತ್ರಿಸಲು ಪೋಲೀಸರು ಲಘು ಲಾಠೀ ಪ್ರಹಾರವನ್ನೂ ನಡೆಸಿದ್ದರು.