LATEST NEWS
ಮಳೆಗೆ ಕೊಚ್ಚಿಹೋದ ಅದ್ಯಪಾಡಿ ಕೈಕಂಬ ರಸ್ತೆ…!!
ಮಂಗಳೂರು, ಜುಲೈ 7: ಮಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು. ಅದ್ಯಪಾಡಿ ಬಳಿ ರಸ್ತೆಯೊಂದು ಕುಸಿದ ಪರಿಣಾಮ ಅದ್ಯಪಾಡಿ ಕೈಕಂಬದ ಸಂಪರ್ಕ ರಸ್ತೆ ಬಂದ್ ಆಗಿದೆ.
ಮಳೆ ಅಬ್ಬರ ಮಂಗಳೂರಿನಲ್ಲಿ ಮುಂದುವರೆದಿದ್ದು, ನೇತ್ರಾವತಿ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಈ ನಡುವೆ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಭೂಕುಸಿತದ ವರದಿಗಳು ಬಂದಿದ್ದು, ಮಂಗಳೂರು ವಿಮಾನ ನಿಲ್ದಾಣದ ಹೊರಭಾಗದ ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆ ಕುಸಿದಿದೆ. ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸುತ್ತುವರಿದ ರಸ್ತೆಯಲ್ಲಿ ಭೂ ಕುಸಿತವಾಗಿದ್ದು ವಿಮಾನದ ರನ್ ವೇಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ನಿಲ್ದಾಣದಲ್ಲಿ ಚಟುವಟಿಕೆಗಳು ದೈನಂದಿನಂತೆ ನಡೆಯುತ್ತಿದ್ದು,ರಸ್ತೆ ದುರಸ್ತಿಯ ಕಾರ್ಯಾಚರಣೆ ನಡೆಯುತ್ತಿದೆ ಸಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿ ಭಯವನ್ನು ಸೃಷ್ಟಿಸಬೇಡಿ ಎಂದು ಹೇಳಿದೆ.
You must be logged in to post a comment Login