DAKSHINA KANNADA
ರಸ್ತೆ ಸರಿಪಡಿಸಲು ಆಗ್ರಹಿಸಿ ಶಾಸಕರ ಕಾರು ತಡೆದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು ಅಕ್ಟೋಬರ್ 31: ತಾರಿಗುಡ್ಡೆಯಲ್ಲಿ ಹಾಳಾಗಿರುವ ರಸ್ತೆ ದುರಸ್ಥಿ ಕೈಗೊಳ್ಳದ ಹಿನ್ನಲೆ ಆಕ್ರೋಶಗೊಂಡ ಸ್ಥಳೀಯರು ಶಾಸಕ ಮಠಂದೂರು ಅವರ ಕಾರು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪುತ್ತೂರು ನಗರ ಮಂಡಲ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾಲ್ಮರ ತಾರಿಗುಡ್ಡೆಗೆ ತೆರಳಿದ್ದ ಶಾಸಕ ಸಂಜೀವ ಮಠಂದೂರುರವರ ಕಾರು ತಡೆದು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭ ಸ್ಥಳದಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪ್ರತಿಭಟನಾ ನಿರತ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.