LATEST NEWS
ಅಂಗಡಿ ಮಾಲಿಕನ್ನು ಕಟ್ಟಿಹಾಕಿ ದರೋಡೆ, ಹಣದೊಂದಿಗೆ ಪರಾರಿ

ಉಡುಪಿ, ಸೆಪ್ಟೆಂಬರ್ 04 : ಗ್ರಾಹಕರ ಸೋಗಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಂಗಡಿ ಮಾಲಿಕರನ್ನು ಕಟ್ಟಿಹಾಕಿ ದರೋಡೆ ಮಾಡಿ ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಕುಂದಾಪುರ ತಾಲೂಕಿನ ಸಾಲಿಗ್ರಾಮದಲ್ಲಿ ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇರುವ ಗ್ರೇಶನ್ ಲೋಬೊ ಎಂಬವರ ಲೋಬೊ ಚಿಕನ್ ಸೆಂಟರಿಗೆ ರಾತ್ರಿ ಗ್ರಾಹಕರ ಸೋಗಿನಲ್ಲಿ ಬಂದ ದರೋಡೆಕೋರರು ಗ್ರೇಶನ್ ಲೋಬೊ ಅವರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಬಳಿಕ ಅವರ ಕೈಗಳನ್ನು ಹಗ್ಗದಿಂದ ಕಟ್ಟಿಹಾಕಿದ್ದಾರೆ. ನಂತರ ಅವರ ಮೇಲೆ ಹಲ್ಲೆ ನಡೆಸಿದ ದರೋಡೆಕೋರರು ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ.
ಗ್ರೇಶನ್ ಅವರ ತಮ್ಮ ಕೋಳಿಯ ತ್ಯಾಜ್ಯವನ್ನು ಹೊರಗೆ ವಿಲೇ ಮಾಡಲು ಹೋಗಿದ್ದು ವಾಪಾಸು ಬಂದು ನೋಡುವಾಗ ಅಣ್ಣ ಗ್ರೇಶನ್ ನೆಲದಲ್ಲಿ ಬಿದ್ದಿದ್ದರು. ಕೂಡಲೇ ಸಹಾಯಕ್ಕಾಗಿ ಸ್ಥಳೀಯರನ್ನು ಕೂಗಿದ ಬಳಿಕ ಅಂಬುಲೆನ್ಸ್ ಮೂಲಕ ಗ್ರೇಶನ್ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಗ್ರೇಶನ್ ಅವರಿಗೆ ಪ್ರಜ್ಞೆ ಬಂದ ಬಳಿಕವಷ್ಟೇ ಇದು ದರೋಡೆ ಎಂಬುವುದು ಮನವರಿಕೆಯಾಗಿದೆ. ಈ ಬಗ್ಗೆ ಪೋಲಿಸರು ದೂರು ದಾಖಲಿಸಿದ್ದು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.