DAKSHINA KANNADA
ಗುರುಪ್ರಸಾದ್ ರೈ ಕುದ್ಕಾಡಿ ಮನೆ ದರೋಡೆ ಪ್ರಕರಣದ ಪ್ರಮುಖ ಆರೋಪಿ ಪಚ್ಚಂಬಳ ರವಿ ಪುತ್ತೂರಿಗೆ
ಪುತ್ತೂರು ನವೆಂಬರ್ 08: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ.
ಸೆಪ್ಟೆಂಬರ್ 6 ರಂದು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ಮನೆಯವರನ್ನು ಕಟ್ಟಿಹಾಕಿ ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಇಡೀ ಪ್ರಕರಣದ ಪ್ರಮುಖ ಆರೋಪಿ ರವಿ ಯಾನೆ ಪಚ್ಚಂಬಳ ರವಿಯನ್ನು ವಿಚಾರಣೆಗಾಗಿ ಪುತ್ತೂರು ಪೊಲೀಸರು ಪುತ್ತೂರಿಗೆ ಕರೆತಂದಿದ್ದಾರೆ.
ಪಚ್ಚಂಬಳ ರವಿ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಜಬ್ಬಾರ್ ಕೊಲೆ ಆರೋಪಿಯಾಗಿದ್ದು, ಇದೀಗ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಈ ನಡುವೆ ಜೈಲಿನಿಂದ ಪೆರೋಲ್ ಪಡೆದು ಬಂದು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಗುರುಪ್ರಸಾದ್ ರೈ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ವಿಚಾರಣೆಯಲ್ಲಿ ಪುತ್ತೂರು ಪೊಲೀಸರು ನಡೆಸಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
https://youtu.be/IlEMnl7GZto