LATEST NEWS
ರಾಕಿಂಗ್ ಸ್ಟಾರ್ ಯಶ್ ಜೊತೆ ಟೆಂಪಲ್ ರನ್ ನಲ್ಲಿ ಕೆಜಿಎಫ್ ಚಿತ್ರತಂಡ….!!

ಉಡುಪಿ ಫೆಬ್ರವರಿ 1: ಎಪ್ರಿಲ್ 14 ರಂದು ದೇಶದಾದ್ಯಂತ ತೆರೆಕಾಣಲಿರುವ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನ ಚಿತ್ರತಂಡವು ಕರಾವಳಿಯ ದೇವಸ್ಥಾನಗಳಲ್ಲಿ ಟೆಂಪಲ್ ರನ್ ಮಾಡುತ್ತಿದೆ. ನಟ ಯಶ್ ಸೇರಿದಂತೆ ಇಡೀ ಚಿತ್ರತಂಡವು ಕೊಲ್ಲೂರಿನ ಮೂಕಾಂಬಿಕೆ ಹಾಗೂ ಆನೆಗುಡ್ಡೆಯ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದೆ.
ಪ್ರಶಾಂತ್ ನೀಲ್ ನಿರ್ದೇಶನ ಮತ್ತು ಹೊಂಬಾಳೆ ಫಿಲಂಸ್ ಬ್ಯಾನರ್‌ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿರುವ ಕೆ.ಜಿ.ಎಫ್–2 ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಪ್ರಗತಿಯಲ್ಲಿದೆ.

ಚಿತ್ರದಲ್ಲಿ ಬಹುಮುಖ್ಯವಾದ ‘ರಮಿಕಾ ಸೇನ್’ ಪಾತ್ರದಲ್ಲಿ ಬಾಲಿವುಡ್‌ನ ನಟಿ ರವಿನಾ ಟಂಡನ್ ನಟಿಸಿದ್ದಾರೆ. ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಬಣ್ಣಹಚ್ಚಿದ್ದು, ಪ್ರಕಾಶ್ ರೈ, ಮಾಳವಿಕಾ ಅವಿನಾಶ್, ಬಿ.ಸುರೇಶ್, ಯಶ್ ಶೆಟ್ಟಿ, ಅರ್ಚನಾ ಜೋಯಿಷ್, ಅಯ್ಯಪ್ಪ ಪಿ.ಶರ್ಮ ಇನ್ನಿತರರು ತಾರಾಬಳಗದಲ್ಲಿದ್ದಾರೆ.