Connect with us

KARNATAKA

ಇದು ಸ್ಯಾಂಪಲ್ ಅಷ್ಟೆ…!! ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಪೋಟೋ ಬಹಿರಂಗ ಪಡಿಸಿದ ಐಪಿಎಸ್ ಅಧಿಕಾರಿ ರೂಪಾ…!!

Share Information

ಬೆಂಗಳೂರು ಫೆಬ್ರವರಿ 19: ರಾಜ್ಯದಲ್ಲಿ ಸದ್ಯ ಸುದ್ದಿಯಲ್ಲಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಅವರ ನಡುವೆ ನಡೆಯುತ್ತಿರುವ ಯುದ್ದ ಮತ್ತೊಂದು ಹಂತಕ್ಕೆ ತಲುಪಿದ್ದು, ಐಪಿಎಸ್ ಅಧಿಕಾರಿ ರೂಪಾ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿ ಪ್ರಶ್ನೆಗಳನ್ನು ಕೇಳಿದ್ದಾರೆ.


ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ​ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್‌ ವಾಗ್ದಾಳಿ ನಡೆಸಿದ್ದರು.  ಇಂದು ಬೆಳಿಗ್ಗೆ ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳು ಪಟ್ಟಿ ಮಾಡಿದ್ದ ಡಿ.ರೂಪಾ ಅವರು, ಇದೀಗ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಂಡು ಸಂಚಲನ ಮೂಡಿಸಿದ್ದಾರೆ.

ಹಂಚಿಕೊಂಡಿರುವ ಹೊಸ ಪೋಸ್ಟ್‌ನಲ್ಲಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸಿ ಹಲವು ಅನುಮಾನದ ಪ್ರಶ್ನೆಗಳನ್ನು ಕೇಳಿದ್ದಾರೆ. ‘ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಫಿಕ್ಸ್‌ಗಳ ಒನ್‌ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ ಪ್ರೈವೆಟ್ ಮ್ಯಾಟರ್ ಆಗುವುದಿಲ್ಲ.

ಐಎಎಸ್ ಸರ್ವಿಸ್ ಕಂಡಕ್ಟ್ ರೂಲ್ಸ್ ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ತನಿಖೆ ಮಾಡಬಹುದು. ಸಲೂನ್ ಹೇರ್‌ಕಟ್ ಚಿತ್ರ, ತಲೆದಿಂಬು ಇಟ್ಟು ಮಲಗಿ ತೆಗೆದಿರುವ ಚಿತ್ರ ನಾರ್ಮಲ್ ಅನ್ನಿಸಬಹುದು ಕೆಲವರಿಗೆ. ಒಂದು ತಿಂಗಳ ಹಿಂದೆ ನನಗೆ ಫೋಟೋ ಸಿಕ್ಕಿದ್ದು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ತನಿಖೆ ನಡೆಯುತ್ತದೆ. ಕ್ರಮ ಏನಾಗುತ್ತದೆ ಎಂದು ಕಾದು ನೋಡುತ್ತೇನೆ ಎಂದು ತಿಳಿಸಿದರು

 

 


Share Information
Advertisement
Click to comment

You must be logged in to post a comment Login

Leave a Reply